alex Certify BIG NEWS: ಪಲ್ಟಿಯಾದ ಟ್ರಾಕ್ಟರ್; ನವವಿವಾಹಿತ ಚಾಲಕ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಲ್ಟಿಯಾದ ಟ್ರಾಕ್ಟರ್; ನವವಿವಾಹಿತ ಚಾಲಕ ದುರ್ಮರಣ

ಚಿಕ್ಕಮಗಳೂರು: ಟ್ರ್ಯಾಕ್ಟರ್ ಪಲ್ಟಿಯಾಗಿ ನವವಿವಾಹಿತ ಚಾಲಕ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆಕೋಟೆ ಬಳಿ ನಡೆದಿದೆ.

28 ವರ್ಷದ ಬಿದರಹಳ್ಳಿ ಹರೀಶ್ ಮೃತ ಚಾಲಕ. ಒಂದೂವರೆ ತಿಂಗಳ ಹಿಂದಷ್ಟೆ ವಿವಾಹವಾಗಿದ್ದ ಹರೀಶ್ ಟ್ರ್ಯಾಕ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಪತ್ನಿಯ ಆಕ್ರಂದನ ಮುಗಿಲುಮುಟ್ಟಿದೆ.

ಇಳಿಜಾರಿನಲ್ಲಿ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹರೀಶ್ ಗುತ್ತಿಗೆದಾರನಾಗಿ ಕೆಲಸ ನಿರ್ವಹಿಸುತ್ತಿದ್ದ.

ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...