alex Certify BIG NEWS: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಒಂದು ವರ್ಷ; ಅಪ್ಪು ಸಮಾಧಿಗೆ ಕುಟುಂಬದವರಿಂದ ಪೂಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಒಂದು ವರ್ಷ; ಅಪ್ಪು ಸಮಾಧಿಗೆ ಕುಟುಂಬದವರಿಂದ ಪೂಜೆ

ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಒಂದು ವರ್ಷ. ಇಂದು ಪುನೀತ್ ರಾಜ್ ಕುಮಾರ್ ಅವರ ಮೊದಲ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅಪ್ಪು ಸಮಾಧಿಗೆ ಡಾ.ರಾಜ್ ಕುಟುಂಬ ಪೂಜೆ ಸಲ್ಲಿಸಲಿದೆ.

ಕಂಠೀರವ ಸ್ಟುಡಿಯೋ ಬಳಿಯಿರುವ ಅಪ್ಪು ಸಮಾಧಿಯತ್ತ ನಟರಾದ ರಾಘವೇಂದ್ರ ರಾಜ್ ಕುಮಾರ್, ಶಿವರಾಜ್ ಕುಮಾರ್, ಪುನೀತ್ ಪತ್ನಿ ಅಶ್ವಿನಿ ಹಾಗೂ ಮನೆಯವರೆಲ್ಲರೂ ಆಗಮಿಸಿದ್ದು, ಪೂಜೆಗೆ ಸಿದ್ಧತೆ ನಡೆಸಿದ್ದಾರೆ. ಅಲ್ಲದೇ ಸಾವಿರಾರು ಜನ ಅಭಿಮಾನಿಗಳು ಅಪ್ಪು ಸಮಾಧಿಯತ್ತ ಧಾವಿಸಿದ್ದಾರೆ.

ಇನ್ನೊಂದೆಡೆ ಅಪ್ಪು ಸಮಾಧಿ ಬಳಿ ಅಭಿಮಾನಿ ಬಳಗದಿಂದ ಗೀತ ನಮನ ಸಲ್ಲಿಸಲಾಗುತ್ತಿದೆ. ಹಾಡಿನ ಮೂಲಕ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ. ಈ ವೇಳೆ ರಾಘವೇಂದ್ರ ರಾಜಕುಮಾರ್ ಬಾನದಾರಿಯಲ್ಲಿ ಸೂರ್ಯ……ಹಾಡಿಗೆ ಧ್ವನಿಯಾದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...