alex Certify BIG NEWS: ಪಾಕಿಸ್ತಾನದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಾಕಿಸ್ತಾನದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ

Imran Khan loses trust vote! Ousted as Pakistan Prime Minister | Imran Khan: ಇಮ್ರಾನ್ ಖಾನ್ ಸರ್ಕಾರ ಪತನ, ಪಾಕಿಸ್ತಾನದ ಹೊಸ ಪ್ರಧಾನಿ ಯಾರು ಗೊತ್ತಾ?World News in Kannada

ಇಸ್ಲಾಮಾಬಾದ್: ಭಾರಿ ಮಳೆ, ಪ್ರವಾಹದಿಂದಾಗಿ ತತ್ತರಿಸಿರುವ ಪಾಕಿಸ್ತಾನದಲ್ಲಿ ಸಾವಿರಾರು ಜನರು ಸಾವನ್ನಪ್ಪಿದ್ದು, ಪಾಕ್ ಸರ್ಕಾರ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.

ಪ್ರವಾಹದ ಹೊಡೆತಕ್ಕೆ ಪಾಕಿಸ್ತಾನದಲ್ಲಿ 343 ಮಕ್ಕಳು ಸೇರಿದಂತೆ 1000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 30 ಮಿಲಿಯನ್ ಜನರು ನಿರಾಶ್ರಿತರಾಗಿದ್ದಾರೆ. ಬಲೂಚಿಸ್ತಾನದಲ್ಲಿ 243, ಖೈಬರ್ ಪಖ್ತುಂಕ್ವಾದಲ್ಲಿ 185, ಗಿಲ್ಗಿಟ್ ಬಾಲ್ಟಿಸ್ತಾನ್ ಪ್ರದೇಶದಲ್ಲಿ 35, ಪ್ರಾಂತ್ಯದಲ್ಲಿ 165 ಜನರು ಸೇರು ಸಾವನ್ನಪ್ಪಿದ್ದಾರೆ.

ಎನ್ ಡಿಎಂಎ ವರದಿ ಪ್ರಕಾರ ಪಾಕಿಸ್ತಾನದಲ್ಲಿ ಆಗಸ್ಟ್‌ನಲ್ಲಿ ಈವರೆಗೆ 166.8 ಮಿಮೀ ಮಳೆಯಾಗಿದೆ. ಸರಾಸರಿ 48 ಮಿಮೀ ಮಳೆಗಿಂತ ಶೇ.241 ರಷ್ಟು ಹೆಚ್ಚು ಮಳೆಯಾಗಿದ್ದು, ಸಿಂಧ್ ಮತ್ತು ಬಲೂಚಿಸ್ತಾನ್ ಹೆಚ್ಚು ಹಾನಿಗೊಳಗಾದ ಪ್ರದೇಶಗಳಾಗಿವೆ. ಪ್ರವಾಹದ ಸಂಕಷ್ಟಕ್ಕೆಸಿಲುಕಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಸರ್ಕಾರ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...