ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಪಾದಯಾತ್ರೆಗೆ ತಡೆ ನೀಡಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ.
ಈಗಾಗಲೇ ಪಾದಯಾತ್ರೆಗೆ ತೆರಳುತ್ತಿದ ಕಾಂಗ್ರೆಸ್ ಕಾರ್ಯಕರ್ತರನ್ನು ಮದ್ದೂರಿನ ನಿಡಘಟ್ಟ ಚೆಕ್ ಪೋಸ್ಟ್ ಬಳಿ ಪೊಲೀಸರು ತಡೆದು ನಿಲ್ಲಿಸಿದ್ದು, ಪೊಲೀಸರು ಹಾಗೂ ಕೈ ಕಾರ್ಯಕರ್ತರ ನಡುವೆ ವಾಗ್ವಾದ ಮಾತಿನ ಚಕಮಕಿ ನಡೆದಿದೆ. ಪಾದಯಾತ್ರೆಗೆ ತೆರಳಲು ಅವಕಾಶವಿಲ್ಲ. ವಾಹನಗಳನ್ನು ಪಕ್ಕಕ್ಕೆ ಹಾಕುವಂತೆ ಶ್ರೀರಂಗಪಟ್ಟಣದ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಅವರನ್ನು ತಡೆದಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ರಸ್ತೆ ಮಧ್ಯೆಯೇ ಹೈಡ್ರಾಮಾ ಆರಂಭವಾಗಿದೆ.
ಕಾರ್ಯಕರ್ತರ ಪಟ್ಟಿಗೆ ಮಣಿದ ಪೊಲೀಸರು ವಿಧಿಯಿಲ್ಲದೇ ಕಾರ್ಯಕರ್ತರನ್ನು ಬಿಟ್ಟುಕಳುಹಿಸಿದ್ದಾರೆ. ಇನ್ನೊಂದೆಡೆ ಪಾದಯಾತ್ರೆ ತೆರಳುತ್ತಿದ್ದ ಕಾರ್ಯಕರ್ತರನ್ನು ಕಾಗೇಪುರ ಗೇಟ್ ಬಳಿ ಪೊಲೀಸರು ತಡೆದು ವಾಪಸ್ ಕಳುಹಿಸದ ಘಟನೆ ನಡೆದಿದೆ.