ಬೆಳಗಾವಿ: ನಿನ್ನೆ ಟ್ರ್ಯಾಕ್ಟರ್ ರ್ಯಾಲಿ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಆಗಮಿಸಿದ್ದ ಕಾಂಗ್ರೆಸ್ ಇಂದು ಪಾದಯಾತ್ರೆಗೆ ಸಜ್ಜಾಗಿದೆ. ಯುವ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ಅಧಿವೇಶನಕ್ಕೆ ಎಂಟ್ರಿ ಕೊಡಲು ಕೈ ಪಡೆ ಸಿದ್ಧತೆ ನಡೆಸಿದೆ.
ಯುವಕರಿಗೆ ಉದ್ಯೋಗ ಆದ್ಯತೆ, ಬೆಲೆ ಏರಿಕೆ ಇಳಿಕೆಗೆ ಒತ್ತಾಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಂದು ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸುತ್ತಿದೆ.
ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದ ಇನ್ಸ್‌ಸ್ಟಾಗ್ರಾಂ
ಅಲ್ಲದೇ ಸದನದಲ್ಲಿ ಕಾಂಗ್ರೆಸ್ ಹಲವು ವಿಷಯಗಳ ಪ್ರಸ್ತಾಪಕ್ಕೆ ಮುಂದಾಗಿದೆ. ಭೂ ಹಗರಣ, ರಮೇಶ್ ಜಾರಕಿಹೊಳಿ ಸಿಡಿ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ನಿಲುವಳಿ ಸೂಚನೆ ಮಂಡಿಸಲು ಸಿದ್ಧತೆ ನಡೆಸಿದೆ. ನಿಲುವಳಿ ಸೂಚನೆ ಮಂಡನೆ ಮಾಡದಂತೆ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.
ಒಟ್ಟಾರೆ ಎಲ್ಲಾ ವಿಚಾರಗಳು ಇಂದು ವಿಧಾನಸಭೆಯಲ್ಲಿ ಪ್ರಸ್ತಾಪವಾಗಲಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಡುವೆ ಗದ್ದಲ-ಕೋಲಾಹಲಕ್ಕೆ ಕಾರಣವಗುವ ಸಾಧ್ಯತೆ ದಟ್ಟವಾಗಿದೆ.