ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಸ್ ಆಗಿದ್ದು, ಸಚಿವ ಗೋವಿಂದ ಕಾರಜೋಳ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ಕಾರಜೋಳ, ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡಿದ್ದು, ನನಗೆ ಕಳವಳ ಆಗಿದೆ. ಸಿದ್ದರಾಮಯ್ಯನವರೇ ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ. ತಮ್ಮ ಆರೋಗ್ಯ ರಕ್ಷಣೆ ಮಹತ್ವದ್ದು ಎಂದು ಸಲಹೆ ನೀಡಿದ್ದಾರೆ.
ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದ್ದು, ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ ತೀವ್ರಗೊಂಡ ಹಿನ್ನೆಲೆಯಲ್ಲಿ ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಚಿಕಿತ್ಸೆಗಾಗಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಎರಡು ದಿನಗಳ ಹಿಂದೆ ಸಿದ್ದರಾಮಯ್ಯ ಕೋವಿಡ್ ಬೂಸ್ಟರ್ ಡೋಸ್ ಪಡೆದಿದ್ದರು. ಇದೇ ಕಾರಣಕ್ಕೆ ಜ್ವರ ಕಾಣಿಸಿಕೊಂಡಿದೆ ಎನ್ನಲಾಗಿದೆ.