ಬೆಂಗಳೂರು: ಪರೇಶ್ ಮೇಸ್ತ ಸಾವು ಪ್ರಕರಣ ಹಾಗೂ ಸಿಬಿಐ ಬಿ ರಿಪೋರ್ಟ್ ವಿಚಾರ ಇದೀಗ ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ ಎಂದು ಹೇಳುವ ಮೂಲಕ ರಾಜ್ಯ ಕಾಂಗ್ರೆಸ್ ಘಟಕ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದೆ.
ಡಿ.ಕೆ ರವಿ ಪ್ರಕರಣ – ವೈಯುಕ್ತಿಕ ಕಾರಣಗಳಿಗೆ ಆತ್ಮಹತ್ಯೆ ಎಂದು ಸಿಬಿಐ ವರದಿಯಲ್ಲಿ ತಿಳಿಸಲಾಗಿದೆ. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ – ಸರ್ಕಾರಕ್ಕೆ ಸಂಬಂಧವಿಲ್ಲ ಎಂದು ವರದಿ, ಈಗ ಪರೇಶ್ ಮೇಸ್ತಾ ಪ್ರಕರಣ – ಸಹಜ ಸಾವು ಎಂದು ಸಿಬಿಐ ವರದಿ ನೀಡುವ ಮೂಲಕ ಅಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿಬಂದಿದ್ದ ಆರೋಪಕ್ಕೆ ಕ್ಲಿನ್ ಚಿಟ್ ದೊರೆತಿದೆ.
ಕಾಂಗ್ರೆಸ್ ವಿರುದ್ಧ ಸುಳ್ಳು ಹೇಳಿದ್ದ ಬಿಜೆಪಿ ರಾಜ್ಯದ ಕ್ಷಮೆ ಕೇಳಬೇಕು ಎಂದು ಸರಣಿ ಟ್ವೀಟ್ ಮೂಲಕ ಆಗ್ರಹಿಸಿದೆ.