ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಅದರ ಬೆಂಬಲಿತ ಸಂಘಟನೆಗಳನ್ನು ಕೇಂದ್ರ ಸರ್ಕಾರ 5 ವರ್ಷಗಳ ಕಾಲ ನಿಷೇಧಿಸಿದ್ದು, ಇದರ ಬೆನ್ನಲ್ಲೇ ರಾಜ್ಯದಾದ್ಯಂತ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.
ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರಿನ ಡಿಜೆ ಹಳ್ಳಿ, ಕೆಜೆ ಹಳ್ಳಿ ಹಾಗೂ ಚಾಮರಾಜಪೇಟೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಜೊತೆಗೆ ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ.