ಕಲಬುರ್ಗಿ: ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೀಡಾಗಿದ್ದ ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ರನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ.
ಅಫಜಲ್ ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಮಹಾಂತೇಶ್ ಪಾಟೀಲ್ ಅವರನ್ನು ನಿನ್ನೆ ಸಿಐಡಿ ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಯನ್ನು ಇಂದು ಕಲಬುರ್ಗಿ 3ನೇ ಜೆ ಎಂ ಎಫ್ ಸಿ ಕೋರ್ಟ್ ಗೆ ಸಿಐಡಿ ತಂಡ ಹಾಜರುಪಡಿಸಿದ್ದು, ಕಸ್ಟಡಿಗೆ ನೀಡುವಂತೆ ಮನವಿ ಮಾಡಿತ್ತು.
ಈ ಹಿನ್ನೆಲೆಯಲ್ಲಿ ಮಹಾಂತೇಶ್ ಪಾಟೀಲ್ ಅವರನ್ನು ಏ.29 ರ ವರೆಗೆ 7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.