alex Certify BIG NEWS: ಪಿಎಸ್‌ಐ ಗೆ ಶಾಸಕ ಎಂ.ಪಿ. ಕುಮಾರಸ್ವಾಮಿ ನಿಂದನೆ ವಿಚಾರ; ನನ್ನ ಗಮನಕ್ಕೆ ಬಂದಿಲ್ಲ ಎಂದ ಗೃಹ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಎಸ್‌ಐ ಗೆ ಶಾಸಕ ಎಂ.ಪಿ. ಕುಮಾರಸ್ವಾಮಿ ನಿಂದನೆ ವಿಚಾರ; ನನ್ನ ಗಮನಕ್ಕೆ ಬಂದಿಲ್ಲ ಎಂದ ಗೃಹ ಸಚಿವ

ತುಮಕೂರು: ಮಲ್ಲಂದೂರು ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಗೆ ಶಾಸಕ ಎಂ.ಪಿ.ಕುಮಾರಸ್ವಾಮಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಶಾಸಕರು ತಾಳ್ಮೆ ಕಳೆದುಕೊಂಡು ಮಾತನಾಡಿರಬಹುದು ಎಂದಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಶಾಸಕರು ನಿಂದಿಸಿದ್ದು ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ವರದಿ ಪಡೆದು ಪರಿಶೀಲಿಸುತ್ತೇನೆ. ನಮ್ಮ ಶಾಸಕರು ತಾಳ್ಮೆ ಕಳೆದುಕೊಂಡಿದ್ದರು ಅನ್ನಿಸುತ್ತದೆ. ಈ ಬಗ್ಗೆ ಅಧಿಕಾರಿಗಳಿಂದ ವರದಿ ತರಿಸಿಕೊಳ್ಳುತ್ತೇನೆ. ಶಾಸಕರನ್ನೂ ಕರೆದು ಮಾತನಾಡುತ್ತೇನೆ ಎಂದರು.

ಜೀವಂತವಾಗಿರುವಾಗಲೇ ತಮ್ಮ ಸಮಾಧಿ ಕಟ್ಟಿಸಿಕೊಂಡ ನಿವೃತ್ತ ಪೊಲೀಸ್ ಅಧಿಕಾರಿ

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಈಗಾಗಲೇ ಆರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಬೇರು ಮಟ್ಟದಲ್ಲಿ ತನಿಖೆ ಆರಂಭವಾಗಿದೆ. ಹಣದ ಹಿಂದೆ ಹೋದರೆ ಗೌರವ ಸಿಗಲ್ಲ. ನಿನ್ನೆ ಪರೀಕ್ಷಾ ಅಕ್ರಮದಲ್ಲಿ ಡಿ ವೈ ಎಸ್ ಪಿ, ಸಿಪಿಐ ಗಳನ್ನು ಬಂಧಿಸಿದ್ದೇವೆ. ಬಂಧಿತರು ಅನೈತಿಕ ಮಾರ್ಗವಾಗಿ ಹಣ ಮಾಡಲು ಹೋಗಿದ್ದರು. ಪ್ರತಿಜ್ಞಾವಿಧಿ ಸ್ವೀಕರಿಸಿ ಪೊಲೀಸ್ ಅಧಿಕಾರಿಗಳಾದವರು ಇಂದು ಪೊಲೀಸ್ ಸಮವಸ್ತ್ರ ಬಿಚ್ಚಿ ಲಾಕಪ್ ನಲ್ಲಿದ್ದಾರೆ. ಇದು ಎಲ್ಲರಿಗೂ ಎಚ್ಚರಿಕೆ ಗಂಟೆಯಾಗಬೇಕು ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...