ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳೇ ಭಾಗಿಯಾಗಿದ್ದು, ಬೇಲಿಯೇ ಎದ್ದು ಹೊಲ ಮೇಯ್ದ ಘಟನೆಯಂತಿದೆ. ಅಕ್ರಮದಲ್ಲಿ ಭಾಗಿಯಾಗಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಪಿಎಸ್ಐ ಅಕ್ರಮಕ್ಕೆ ಸಾಥ್ ನೀಡಿದ್ದ ಲಿಂಗಸಗೂರು ಡಿ ವೈ ಎಸ್ ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಬೆರಳಚ್ಚು ವಿಭಾಗದ ಸಿಪಿಐ ಆನಂದ್ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಪಿಎಸ್ಐ ಅಕ್ರಮದಲ್ಲಿ ಸಿಪಿಐ ಆನಂದ್ 2 ಕೋಟಿ ರೂಪಾಯಿ ಡೀಲ್ ಮಾಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಇಬ್ಬರು ಅಧಿಕಾರಿಗಳು ಅಕ್ರಮಕ್ಕೆ ಸಾಥ್ ನೀಡಿದ್ದ ಹಿನ್ನೆಲೆಯಲ್ಲಿ ಇದೀಗ ಅರೆಸ್ಟ್ ಆಗಿದ್ದಾರೆ.