ಕಲಬುರ್ಗಿ: ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯ 11 ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.
ಕಲಬುರ್ಗಿಯ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದಲ್ಲಿ ಭಾಗಿಯಾಗಿದ್ದ ಸ್ಟೇಷನ್ ಬಜಾರ್ ಠಾಣೆಯ ಮೂವರು ಸಿಬ್ಬಂದಿಗಳು ಹಾಗೂ ಮಹಿಳಾ ಠಾಣೆಯ 8 ಸಿಬ್ಬಂದಿಗಳು ಸೇರಿ 11 ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.
545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಈ ಎಲ್ಲಾ ಸಿಬ್ಬಂದಿಗಳು ಕರ್ತವ್ಯಲೋಪವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.