ಕಲಬುರ್ಗಿ: ಪಿಎಸ್ಐ ನೇಮಕಾತಿ ಅಕ್ರಮದ ಆರೋಪಿ ಮಂಜುನಾಥ್ ಮೇಳಕುಂದಿ ಇಂದು ಕಲಬುರ್ಗಿ ಸಿಐಡಿ ಕಚೇರಿಗೆ ಬಂದು ಶರಣಾಗಿದ್ದು, ಅಕ್ರಮಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾನೆ.
ಆಟೋದಲ್ಲಿ ಸಿಐಡಿ ಕಚೇರಿಗೆ ಬಂದು ಶರಣಾದ ಮಂಜುನಾಥ್, ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ನಾನು ಯಾವುದೇ ಅಕ್ರಮ ನಡೆಸಿಲ್ಲ. ಆದರೆ ನನ್ನ ವಿರುದ್ಧ ಆರೋಪ ಕೇಳಿ ಬರುತ್ತಿರುವುದರಿಂದ ಶರಣಾಗಿದ್ದೇನೆ ಎಂದಿದ್ದಾನೆ.
ಅನಾರೋಗ್ಯ ಹಿನ್ನೆಲೆಯಲ್ಲಿ ನಾನು ನಮ್ಮ ಊರು ಮಂಗಳೂರಿಗೆ ಹೋಗಿದ್ದೆ. ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಆದರೂ ನನ್ನ ಹೆಸರು ಕೇಳಿಬರುತ್ತಿದೆ. ಪೊಲೀಸರಿಗೆ ಎಲ್ಲ ವಿಚಾರಗಳನ್ನು ತಿಳಿಸುವುದಾಗಿ ಹೇಳಿದ್ದಾನೆ.
ಸಿಐಡಿ ಪೊಲೀಸರ ಮುಂದೆ ಶರಣಾಗದಿದ್ದಲ್ಲಿ ಆಸ್ತಿ ಮುಟ್ಟುಗೋಲು ಹಾಕಲು ಕೋರ್ಟ್ ನಿಂದ ಆದೇಶ ಹೊರಬಿದ್ದ ಬೆನ್ನಲ್ಲೇ ಮಂಜುನಾಥ್ ಮೇಳಕುಂದಿ ಶರಣಾಗಿದ್ದಾನೆ ಎನ್ನಲಾಗಿದೆ.