ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷ, ಸ್ಟಾಂಪ್ ವೆಂಡರ್ ಓರ್ವರನ್ನು ಬಂಧಿಸಿದ್ದಾರೆ.
ಬೆಕ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಟ್ಯಾಂಪ್ ವೆಂಡರ್ ಕೇಶವಮೂರ್ತಿ ಬಂಧಿತ ಆರೋಪಿ. ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಕೇಶವಮೂರ್ತಿಯನ್ನು ನಿನ್ನೆ ಸಿಐಡಿ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು. ತೀವ್ರ ವಿಚಾರಣೆ ಬಳಿಕ ಇಂದು ಕೇಶವಮೂರ್ತಿಯನ್ನು ಬಂಧಿಸಿದ್ದಾರೆ.
ಆದರೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೋರ್ವ ಪ್ರಭಾವಿ ವ್ಯಕ್ತಿ ಎಸ್ಕೇಪ್ ಆಗಿದ್ದು, ಆತನಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.