ಬೆಂಗಳೂರು: ಪಿ ಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮೊದಲ ರ್ಯಾಂಕ್ ಪಡೆದಿದ್ದ ಅಭ್ಯರ್ಥಿ ಸುಪ್ರಿಯಾಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
545 ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಈವರೆಗೆ 52 ಜನರನ್ನು ಬಂಧಿಸಲಾಗಿದೆ. ಇದೀಗ ಪಿ ಎಸ್ ಐ ನೇಮಕಾತಿಯಲ್ಲಿ ಮೊದಲ ರ್ಯಾಂಕ್ ಪಡೆದಿದ್ದ ಸುಪ್ರಿಯಾ ಹುಂಡೇಕರ್ ಅವರನ್ನು ಬಂಧಿಸಲಾಗಿದೆ. ಪ್ರಕರಣದ ಇನ್ನೋರ್ವ ಆರೋಪಿಗಾಗಿ ತೀವ್ರ ಶೋಧ ನಡೆಸಲಾಗಿದೆ.
ಕಲಬುರ್ಗಿಯ ಜೇವರ್ಗಿ ತಾಲೂಕಿನ ಹಿಪ್ಪರಗಿ ಗ್ರಾಮದ ನಿವಾಸಿಯಾಗಿದ್ದ ಸುಪ್ರಿಯಾ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದಿರುವ ಆರೋಪ ಕೇಳಿಬಂದಿದೆ. ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಅವರು ಮೊದಲ ರ್ಯಾಂಕ್ ಪಡೆದುಕೊಂಡಿದ್ದರು. ಸುಪ್ರಿಯಾಳನ್ನು ನಿನ್ನೆ ವಶಕ್ಕೆ ಪಡೆದಿದ್ದ ಸಿಐಡಿ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದು, ಅಕ್ರಮದಲ್ಲಿ ಭಾಗಿಯಾಗಿರುವ ಬಗ್ಗೆ ಖಚಿತ ಪಟ್ಟ ಹಿನ್ನೆಲೆಯಲ್ಲಿ ಅವರನ್ನು ಇಂದು ಬಂಧಿಸಲಾಗಿದೆ.