ಬೀದರ್: ಮೂಲ ಅನುಭವ ಮಂಟಪ ಎಲ್ಲಿದೆ ಎಂಬುದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆಯುತ್ತಿರುವ ಸ್ವಾಮೀಜಿಗಳ ನಡೆ ಮೂಲ ಅನುಭವ ಮಂಟಪದ ಕಡೆಗೆ ಸಮಾವೇಶದಲ್ಲಿ ಮಾತನಾಡಿದ ಅವರು, ಬಸವಕಲ್ಯಾಣದಲ್ಲಿ ಮೂಲ ಅನುಭವ ಮಂಟಪವಿದೆ. ಪೀರ್ ಪಾಷಾ ಮಸೀದಿಯೇ ಮೂಲ ಅನುಭವ ಮಂಟಪ ಎಂಬುದು ಎಲ್ಲರಿಗೂ ಗೊತ್ತಾಗಿದೆ. ಸರ್ಕಾರ ಪುರಾತತ್ವ ಇಲಾಖೆ ಮೂಲಕ ಈ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.
ಬಸವಕಲ್ಯಾಣದಲ್ಲಿ ನಡೆಯುತ್ತಿರುವ ಮಠಾಧೀಶರ ನಡೆ ಮೂಲ ಅನುಭವ ಮಂಟಪದ ಕಡೆ ಸಭೆಯಲ್ಲಿ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರದ ಒಟ್ಟು 200ಕ್ಕೂ ಹೆಚ್ಚು ಸ್ವಾಮೀಜಿಗಳು ಭಾಗಿಯಾಗಿದ್ದಾರೆ.