
ಖಾರ್ಕಿವ್‌ನಿಂದ ಭಾರತೀಯ ವಿದ್ಯಾರ್ಥಿಗಳ ಗುಂಪನ್ನು ತುರ್ತಾಗಿ ಸ್ಥಳಾಂತರಿಸಲು ರಷ್ಯಾ ಪ್ರಯತ್ನಿಸುತ್ತಿದೆ. ಆದರೆ ಉಕ್ರೇನ್ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆಯಾಳುಗಳಂತೆ ನೋಡಿಕೊಳ್ತಿದೆ ಎಂದು ರಷ್ಯಾದ ವರದಿಗಳು ತಿಳಿಸಿವೆ.
ಸುದ್ದಿಗೋಷ್ಠಿಯಲ್ಲಿ ಈ ವಿಚಾರವಾಗಿ ಮಾತನಾಡಿದ, ರಷ್ಯಾದ ನಿಯೋಜಿತ ರಾಯಭಾರಿ ಡೆನಿಸ್ ಅಲಿಪೋವ್, ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ಸುರಕ್ಷತೆಯ ವಿಷಯದ ಬಗ್ಗೆ ರಷ್ಯಾ ಭಾರತದೊಂದಿಗೆ ಸಂಪರ್ಕದಲ್ಲಿದೆ ಮತ್ತು ಶೀಘ್ರದಲ್ಲೇ ಸುರಕ್ಷಿತ ಮಾರ್ಗವನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.
ಇದರ ಮಧ್ಯೆ ಖಾರ್ಕಿವ್ ನಲ್ಲಿರುವ ಭಾರತೀಯರ ರಕ್ಷಣೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಇದಾದ ಬಳಿಕ ರಷ್ಯಾ ಸೇನೆ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಮುಂದಾಗಿದೆ.
ಈ ಮೊದಲು ಮಂಗಳವಾರದಂದು ಭಾರತೀಯ ಮೂಲದ ವೈದ್ಯಕೀಯ ವಿದ್ಯಾರ್ಥಿ ನವೀನ್ ರಷ್ಯಾ ಷೆಲ್ ದಾಳಿಗೆ ಮೃತಪಟ್ಟಿದ್ದರು. ಇದಾದ ಮರುದಿನವೇ ಪಂಜಾಬ್ ಮೂಲದ ಮತ್ತೊಬ್ಬ ವಿದ್ಯಾರ್ಥಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿ ಮೃತಪಟ್ಟಿದ್ದರು. ಉಕ್ರೇನ್ ನಲ್ಲಿ ಪರಿಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ನಿರಂತರ ಸಭೆ ನಡೆಸಿದ್ದರು. ಅಲ್ಲದೆ ರಷ್ಯಾ ಅಧ್ಯಕ್ಷರ ಜೊತೆಯೂ ಮಾತುಕತೆ ನಡೆಸಿದ್ದರು.