
ತೀವ್ರ ಕುತೂಹಲ ಕೆರಳಿಸಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿಯಿಂದ ತಮಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷೇತರವಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕಿಳಿದಿದ್ದು, ಅವರಿಗೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು.
ಆರಂಭಿಕ ಮತ ಎಣಿಕೆಯಲ್ಲಿ ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಆಶಾ ತಿಮ್ಮಪ್ಪ ಅವರಿಗಿಂತ ಅರುಣ್ ಕುಮಾರ್ ಪುತ್ತಿಲ ಕೊಂಚ ಮುನ್ನಡೆ ಸಾಧಿಸಿದ್ದಾರೆ ಎಂದು ಮೂಲಗಳು ಹೇಳಿವೆ.