BIG NEWS: ಪುತ್ರನಿಗೆ ಟಿಕೆಟ್ ಕೊಡಿಸಲು ಸಚಿವ ಎಂಟಿಬಿ ನಾಗರಾಜ್ ಕಸರತ್ತು

ಬೆಂಗಳೂರು: ನವದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಎಂಟಿಬಿ ನಾಗರಾಜ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ಎಂಟಿಬಿ ನಾಗರಾಜ್ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸುವ ಸಲುವಾಗಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಯಡಿಯೂರಪ್ಪ ಆಗಿರುವುದರಿಂದ ಈ ನಿಟ್ಟಿನಲ್ಲಿ ಸಚಿವರು ಮಾತುಕತೆ ನಡೆಸಿದ್ದಾರೆ.

ಈ ವೇಳೆ ಹೊಸಕೋಟೆ ಕ್ಷೇತ್ರದ ಬಿಜೆಪಿ ಟಿಕೆಟ್ ಪುತ್ರನಿಗೆ ನೀಡುವಂತೆ ಮನವಿ ಮಾಡಿದ್ದಾರೆ. ಏಪ್ರಿಲ್ 9 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಟಿಕೆಟ್ ಆಕಾಂಕ್ಷಿಗಳು ಭಾರಿ ಪೈಪೋಟಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read