BIG NEWS: ಪುತ್ರನ ಜೊತೆ ಮೈಸೂರಿಗಿಂದು BSY ಭೇಟಿ; ವಿಜಯೇಂದ್ರ ಸ್ಪರ್ಧೆ ಕುರಿತು ತೀವ್ರ ಕುತೂಹಲ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಇಲ್ಲಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದರ ಮಧ್ಯೆ ಯಡಿಯೂರಪ್ಪನವರು ಇಂದು ತಮ್ಮ ಪುತ್ರ ವಿಜಯೇಂದ್ರ ಜೊತೆ ಮೈಸೂರಿಗೆ ತೆರಳುತ್ತಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಖಾಸಗಿ ಕಾರ್ಯಕ್ರಮದ ಕಾರಣಕ್ಕೆ ಇವರುಗಳು ಮೈಸೂರಿಗೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ತಮ್ಮ ಪುತ್ರ ವಿಜಯೇಂದ್ರ ಅವರನ್ನು ತಾವು ಈವರೆಗೆ ಪ್ರತಿನಿಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರದಿಂದ ಕಣಕ್ಕಿಳಿಸಲು ಯಡಿಯೂರಪ್ಪನವರು ಬಯಸಿದ್ದರಾದರೂ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರನ್ನು ಎದುರಿಸಲು ವಿಜಯೇಂದ್ರ ಅವರೇ ಸೂಕ್ತ ಎಂದು ಬಿಜೆಪಿ ನಾಯಕರು ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಹೀಗಾಗಿ ಯಡಿಯೂರಪ್ಪ ಇಂದು ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read