ಹುಬ್ಬಳ್ಳಿ: ಡ್ರಗ್ಸ್ ನಂತಹ ಮಾದಕ ವಸ್ತು ಮಾರಾಟಕ್ಕೆ ಕಡಿವಾಣ ಹಾಕಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸರೇ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಅಚ್ಚರಿ ಎನಿಸಿದರೂ ನಿಜ. ಪೊಲೀಸರೇ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣ ಸಂಬಂಧ ಇದೀಗ ಇನ್ಸ್ ಪೆಕ್ಟರ್ ಸೇರಿ 7 ಸಿಬ್ಬಂದಿಗಳನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಸರ್ಕಾರದ ಈ ಉದ್ಯೋಗಿಗಳಿಗೆ ಹಬ್ಬಕ್ಕೂ ಮುನ್ನ ಭರ್ಜರಿ ʼಬಂಪರ್ʼ ಕೊಡುಗೆ
ಕಳೆದ ವಾರ ನವನಗರ ಠಾಣೆ ಪೊಲೀಸರು ಗಾಂಜಾ ಮಾರಾಟಗಾರರನ್ನು ಸೆರೆ ಹಿಡಿದಿದ್ದರು. ಆದರೆ ಕೇಸ್ ದಾಖಲಿಸದೇ ಹಣ ಪಡೆದು, ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದರು. ಆರೋಪಿಗಳಿಂದ 1 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿತ್ತು. ಆದರೆ ಹೀಗೆ ವಶಕ್ಕೆ ಪಡೆದ ಗಾಂಜಾವನ್ನು ಪೊಲೀಸರೇ ಮಾರಾಟ ಮಾಡಿದ್ದಾರೆ ಎಂಬುದು ತನಿಖೆಯಿಂದ ಸಾಬೀತಾಗಿತ್ತು.
ಈ ಹಿನ್ನೆಲೆಯಲ್ಲಿ ಇದೀಗ ನವನಗರ ಠಾಣೆ ಇನ್ಸ್ ಪೆಕ್ಟರ್ ವಿಶ್ವನಾಥ ಚೌಗಲೆ, ಎಎಸ್ ಐ ವಿಕ್ರಮ್ ಪಾಟೀಲ್ ಸೇರಿದಂತೆ 7 ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.