alex Certify BIG NEWS: ಪೊಲೀಸರು ಬೆನ್ನಟ್ಟಿದ್ದ ಯುವಕ ತಪ್ಪಿಸಿಕೊಳ್ಳಲು ಹೋಗಿ ಕಟ್ಟಡದಿಂದ ಬಿದ್ದು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೊಲೀಸರು ಬೆನ್ನಟ್ಟಿದ್ದ ಯುವಕ ತಪ್ಪಿಸಿಕೊಳ್ಳಲು ಹೋಗಿ ಕಟ್ಟಡದಿಂದ ಬಿದ್ದು ಸಾವು

ಬೆಂಗಳೂರು: ಪೊಲೀಸರು ದಾಳಿ ನಡೆಸುತ್ತಿದ್ದಾಗ ತಪ್ಪಿಸಿಕೊಳ್ಳಲು ಓಡುತ್ತಿದ್ದ ವೇಳೆ ಕಟ್ಟಡದಿಂದ ಬಿದ್ದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ನಡೆದಿದೆ.

ಸಾರ್ವಜನಿಕ ಸ್ಥಳದಲ್ಲಿ ಯುವಕರು ಗಾಂಜಾ ಸೇವಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಯುವಕರ ಗುಂಪು ಪೊಲೀಸರನ್ನು ಕಂಡು ಸ್ಥಳದಿಂದ ಪರಾರಿಯಾಗಿದೆ. ರವಿ ಎಂಬಾತ ಪೊಲೀಸರ ಕೈಗೆ ಸಿಕ್ಕಿಬೀಳುತ್ತೇನೆ ಎಂದು ತಪ್ಪಿಸಿಕೊಳ್ಳಲು ಓಡಿದ್ದಾನೆ.

ಪೊಲೀಸರು ಆತನ ಬೆನ್ನಟ್ಟಿದ್ದಾರೆ. ಈ ವೇಳೆ ಯುವಕ ಕಟ್ಟಡದ ಮೇಲೆ ಹತ್ತಿ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಆಯತಪ್ಪಿ ಕಟ್ಟಡದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಯುವಕನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಯುವಕ ರವಿ ಸಾವನ್ನಪ್ಪಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...