ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಕೇಸ್ ಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿ ಖಂಡಿಸಿ ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾಗುತ್ತಿದ್ದಂತೆ ಯೂಥ್ ಕಾಂಗ್ರೆಸ್ ಅಧ್ಯಕ್ಷರು ಓಡಿ ಹೋಗಿ ತಪ್ಪಿಸಿಕೊಂಡ ಘಟನೆ ನಡೆದಿದೆ.
ಇಡಿ ಕಚೇರಿ ಬಳಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ನೇತೃತ್ವದಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಬಿ.ವಿ. ಶ್ರೀನಿವಾಸ್ ಬಳಿ ಪ್ರತಿಭಟನೆ ಕೈಬಿಡುವಂತೆ ಸೂಚಿಸಿದ್ದು, ಇದಕ್ಕೆ ಶ್ರೀನಿವಾಸ್ ಒಪ್ಪಿಲ್ಲ. ಈ ವೇಳೆ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ತಕ್ಷಣ ಪೊಲೀಸರ ಕೈಯಿಂದ ತಪ್ಪಿಸಿಕೊಂಡ ಶ್ರೀನಿವಾಸ್ ಸ್ಥಳದಿಂದ ಓಡಿ ಹೋಗಿ ಎಸ್ಕೇಪ್ ಆಗಿದ್ದಾರೆ.
ಜಾವೇದ್ ಪುತ್ರಿಯನ್ನು ಬೆಂಬಲಿಸಿ ಜೆ.ಎನ್.ಯು. ನಲ್ಲಿ ಪ್ರತಿಭಟನೆ
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.