ಬೆಂಗಳೂರು: ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಈ ಮೂಲಕ ಮತ್ತೋರ್ವ ಖಡಕ್ ಪೊಲೀಸ್ ಅಧಿಕಾರಿ ರಾಜಕೀಯಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.
ಭಾಸ್ಕರ್ ರಾವ್ ಯಾವ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಬಗ್ಗೆ ಇದ್ದ ಕುತೂಹಲಕ್ಕೆ ಇದೀಗ ಬಹುತೇಕ ತೆರೆ ಬಿದ್ದಿದೆ. ಆಮ್ ಆದ್ಮಿ ಪಕ್ಷ ಸೇರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆಪ್ ಸೇರ್ಪಡೆ ಬಳಿಕ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.
BIG NEWS: ಮಸೀದಿಗಳಲ್ಲಿನ ಧ್ವನಿವರ್ಧಕ ತೆಗೆಸಿ; ಇಲ್ಲದಿದ್ದರೆ ಹನುಮಾನ್ ಚಾಲೀಸ್ ಹಾಕುವ ಎಚ್ಚರಿಕೆ ನೀಡಿದ ರಾಜ್ ಠಾಕ್ರೆ
32 ವರ್ಷಗಳ ಐಪಿಎಸ್ ಜೀವನಕ್ಕೆ ತೆರೆ ಎಳೆಯುತ್ತಿದ್ದೇನೆ ಎಂದು ಹೇಳುವ ಮೂಲಕ ಹೊಸ ಪಯಣದ ಬಗ್ಗೆ ಭಾಸ್ಕರ್ ರಾವ್ ಸುಳಿವು ನೀಡಿದ್ದರು. ಇದೀಗ ಆಮ್ ಆದ್ಮಿ ಪಕ್ಷದ ಮೂಲಕ ರಾಜಕೀಯಕ್ಕೆ ಧುಮುಕಲು ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.