ಬೆಂಗಳೂರು: ಇನ್ಮುಂದೆ ಮಂಗಳಮುಖಿಯರು ಕೂಡ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸಬಹುದು. ಕೆ ಎಸ್ ಆರ್ ಪಿ ಹಾಗೂ ಭಾರತೀಯ ರಿಸರ್ವ್ ಬೆಟಾಲಿಯನ್ ನ ವಿಶೇಷ ಮೀಸಲು ಉಪ ನಿರೀಕ್ಷಕರ ಹುದ್ದೆಗೆ ಪುರುಷ, ಮಹಿಳೆ ಹಾಗೂ ಮಂಗಳಮುಖಿಯರಿಗೆ ಅರ್ಜಿ ಸಲ್ಲಿಸಲು ಕೆ ಎಸ್ ಪಿ ಆಹ್ವಾನ ನೀಡಿದೆ.
ಈ ಮೂಲಕ ಕರ್ನಾಟಕದಲ್ಲಿ ಮಂಗಳಮುಖಿಯರಿಗೆ ಮಹತ್ವದ ಅವಕಾಶವನ್ನು ನೀಡಲಾಗಿದ್ದು, ಪೊಲೀಸ್ ಇಲಾಖೆಯ ಎಲ್ಲಾ ವಿಭಾಗದಲ್ಲಿಯೂ ಅವರು ಕೆಲಸ ಮಾಡಬಹುದಾಗಿದೆ. ಪ್ರತಿ ವಿಭಾಗದಲ್ಲಿಯೂ ಶೇ.1ರಷ್ಟು ಮೀಸಲಾತಿ ನೀಡಲಾಗಿದೆ.
BIG NEWS: ‘ಸಿ.ಟಿ.ರವಿ ಅಲ್ಲ, ಪಟಾಕಿ ರವಿ’; ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಕಾಲೆಳೆದ ಡಿ.ಕೆ.ಶಿವಕುಮಾರ್
ಈ ಕುರಿತು ಸ್ಪಷ್ಟ ಮಾಹಿತಿ ನೀಡಿರುವ ಡಿಜಿ-ಐಜಿಪಿ ಪ್ರವೀಣ್ ಸೂದ್, ಕರ್ನಾಟಕದಲ್ಲಿ ಮಂಗಳಮುಖಿಯರಿಗೆ ಪೊಲೀಸ್ ಇಲಾಖೆಯಲ್ಲಿ ಕೆಲಸಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸೋಮವಾರ ಅಧಿಸೂಚನೆ ಹೊರಡಿಸಲಾಗಿದೆ. ಮಂಗಳಮುಖಿಯರಿಗೆ ಈ ವ್ಯವಸ್ಥೆ ಕಲ್ಪಿಸಿದ ಮೊದಲ ಸರ್ಕಾರಿ ಇಲಾಖೆ ಎಂಬ ಹೆಗ್ಗಳಿಕೆ ನಮ್ಮದು ಎಂದು ತಿಳಿಸಿದ್ದಾರೆ.