alex Certify BIG NEWS: ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ; ಕಾನ್ಸ್ ಟೇಬಲ್ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ; ಕಾನ್ಸ್ ಟೇಬಲ್ ಬಲೆಗೆ

ದೇವನಹಳ್ಳಿ: ಪೊಲೀಸ್ ಕಾನ್ಸ್ ಟೇಬಲ್ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ತಾಲೂಕಿನ ವಿಜಯಪುರ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದು, ಕಾನ್ಸ್ ಟೇಬಲ್ ಚಂದ್ರಶೇಖರ್ ಸಿಕ್ಕಿಬಿದ್ದಿದ್ದಾರೆ.

ಪ್ರಕರಣವನ್ನು ಕೈಬಿಡಲು ಮಂಜುನಾಥ್ ಎಂಬುವವರಿಂದ 30 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಠಾಣೆ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸ್ ಪೇದೆ ಚಂದ್ರಶೇಖರ್ ನನ್ನು ವಶಕ್ಕೆ ಪಡೆದಿದ್ದಾರೆ.

ಮಂಜುನಾಥ್ ಹಾಗೂ ಆತನ ಸಹೋದರಿ ನಡುವೆ ಹಣಕಾಸು ವಿಚಾರವಾಗಿ ಗಲಾಟೆ ನಡೆದಿತ್ತು. ಮಜುನಾಥ್ ನನ್ನು ವಿಚಾರಣೆಗೆಂದು ಕರೆದು ಠಾಣೆಯಲ್ಲಿ ಸೆಲ್ ನಲ್ಲಿ ಕೂರಿಸಿದ್ದರು. ಬಿಡುಗಡೆ ಮಾಡಬೇಕು ಎಂದರೆ 3 ಲಕ್ಷ 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 30 ಸಾವಿರ ಮುಂಗಡವಾಗಿ ಪಡೆಯುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತರು ದಾಳಿ ನಡೆಸಿ ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...