ತುಮಕೂರು: ರಾಜ್ಯದಲ್ಲಿ 15,000 ಪೊಲೀಸ್ ಹುದ್ದೆ ಖಾಲಿಯಿದ್ದು, ಈಗಾಗಲೇ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಗೃಹ ಸಚಿವರು, ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಾತಿಗೆ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರಿಗೆ 1 ಸಾವಿರ ಕೋಟಿ ಮಂಜೂರಾಗಿದೆ. ಕೇಂದ್ರದಿಂದ ಶೇ.50 ಹಾಗೂ ರಾಜ್ಯದಿಂದ ಶೇ.50ರಷ್ಟು ಅನುದಾನ ನೀಡಬೇಕು. ಈಗಾಗಲೆ ಕೇಂದ್ರ ಸರ್ಕಾರ ಶೇ.45ರಷ್ಟು ಅನುದಾನ ಮಂಜೂರು ಮಾಡಿದೆ. ರಾಜ್ಯ ಸರ್ಕಾರ 443 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದು ಹೇಳಿದರು.