alex Certify BIG NEWS: ಪೊಲೀಸ್ ನೇಮಕಾತಿ ಆರಂಭ; ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೊಲೀಸ್ ನೇಮಕಾತಿ ಆರಂಭ; ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶ

ತುಮಕೂರು: ರಾಜ್ಯದಲ್ಲಿ 15,000 ಪೊಲೀಸ್ ಹುದ್ದೆ ಖಾಲಿಯಿದ್ದು, ಈಗಾಗಲೇ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಗೃಹ ಸಚಿವರು, ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಾತಿಗೆ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರಿಗೆ 1 ಸಾವಿರ ಕೋಟಿ ಮಂಜೂರಾಗಿದೆ. ಕೇಂದ್ರದಿಂದ ಶೇ.50 ಹಾಗೂ ರಾಜ್ಯದಿಂದ ಶೇ.50ರಷ್ಟು ಅನುದಾನ ನೀಡಬೇಕು. ಈಗಾಗಲೆ ಕೇಂದ್ರ ಸರ್ಕಾರ ಶೇ.45ರಷ್ಟು ಅನುದಾನ ಮಂಜೂರು ಮಾಡಿದೆ. ರಾಜ್ಯ ಸರ್ಕಾರ 443 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...