
ಮಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಪರಾಧಿಯನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದ ಪೊಲೀಸ್ ಅಧಿಕಾರಿಗಳಿಬ್ಬರಿಗೆ ಕೋರ್ಟ್ ದಂಡ ವಿಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಇನ್ಸ್ ಪೆಕ್ಟರ್ ರೇವತಿ ಹಾಗೂ ಎಸ್ ಐ ರೋಸಮ್ಮ ಎಂಬ ಅಧಿಕಾರಿಗಳಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಪೋಕ್ಸೋ ಕೋರ್ಟ್ ಆದೇಶ ಹೊರಡಿಸಿದೆ. ಅಲ್ಲದೇ ಇಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆ ಮುಖ್ಯಕಾರ್ಯದರ್ಶಿಗೆ ಸೂಚಿಸಿದೆ.
ಪೋಕ್ಸೋ ಪ್ರಕರಣದಲ್ಲಿ ನವೀನ್ ಎಂಬಾತನನ್ನು ಬಂಧಿಸಿದ್ದ ಪೊಲೀಸ್ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ವೇಳೆ ನವೀನ್ ನಿರಪರಾಧಿ ಎಂಬುದು ತಿಳಿದುಬಂದಿದೆ. ಅಲ್ಲದೇ ಆತನನ್ನು ಖುಲಾಸೆ ಮಾಡಲಾಗಿದೆ. ತಪ್ಪು ವ್ಯಕ್ತಿಯನ್ನು ಬಂಧಿಸಿದ್ದಕ್ಕೆ ಇದೀಗ ಇನ್ಸ್ ಪೆಕ್ಟರ್ ಹಾಗೂ ಎಸ್ ಐ ಇಬ್ಬರಿಗೂ ದಂಡ ವಿಧಿಸಲಾಗಿದೆ.