ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪರಸ್ಪರರ ವಿರುದ್ಧ ಆರೋಪ – ಪ್ರತ್ಯಾರೋಪ ಮಾಡಿ ಪೋಸ್ಟರ್ ಅಂಟಿಸಿದ್ದರೆ ಈ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ.
ಪೋಸ್ಟರ್ ಅಂಟಿಸಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಹೈ ಗ್ರೌಂಡ್ಸ್ ಠಾಣೆ ಪೊಲೀಸರು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ಪೋಸ್ಟರ್ ಅಂಟಿಸುವ ಮುನ್ನ ಸ್ಥಳೀಯ ಸಂಸ್ಥೆಯಿಂದ ಅನುಮತಿ ಪಡೆಯಬೇಕೆಂಬ ನಿಯಮವಿದ್ದು, ಇದನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.