alex Certify BIG NEWS: ಪೌರಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ಗೋಲ್ ಮಾಲ್; ಲಕ್ಷಾಂತರ ರೂಪಾಯಿ ಲೂಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೌರಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ಗೋಲ್ ಮಾಲ್; ಲಕ್ಷಾಂತರ ರೂಪಾಯಿ ಲೂಟಿ

How out of the money option works : an insight - iPleaders

ಬೆಂಗಳೂರು: ಪೌರಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ಗೋಲ್ ಮಾಲ್ ನಡೆದಿದ್ದು, ನಕಲಿ ಬಿಲ್ ಸೃಷ್ಟಿಸಿ 29 ಲಕ್ಷ ರೂಪಾಯಿ ಹಣ ಲೂಟಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ತುಮಕೂರು ಪಾಲಿಕೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೌರಕಾರ್ಮಿಕರಿಗೆ ಸ್ತನ ಕ್ಯಾನ್ಸರ್ ಹಾಗೂ ಗರ್ಭಕೋಶ ಪರೀಕ್ಷೆ ನಡೆಸಲಾಗುತ್ತಿದೆ. ಪ್ರತಿವರ್ಷದಂತೆ 2021ರಲ್ಲಿ ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, 87 ಪುರುಷ, 384 ಮಹಿಳಾ ಪೌರಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗಿದೆ. ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ಆರೋಗ್ಯ ತಪಾಸಣೆ ಟೆಂಡರ್ ಪಡೆದಿತ್ತು. ಪೌರಕಾರ್ಮಿಕರ ಹೆಸರಲ್ಲಿ ಲಕ್ಷಾಂತರ ರೂಪಾಯಿ ಲೂಟಿ ಮಾಡಿದೆ ಎಂದು ಆರೋಪಿಸಲಾಗಿದೆ.

ಮಾಹಿತಿ ಹಕ್ಕು ಕಾರ್ಯಕರ್ತ ಇಮ್ರಾನ್ ಗಂಭೀರ ಆರೋಪ ಮಾಡಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...