ರಾಜ್ಯದ ಕೆಲವು ಭಾಗಗಳಲ್ಲಿ ಪ್ರಕ್ಷುಬ್ಧ ಸ್ಥಿತಿ ಸೃಷ್ಟಿಯಾಗಲು ಕೇಂದ್ರ ಹಾಗೂ ರಾಜ್ಯ ರಾಜಕಾರಣವೇ ಕಾರಣ. ಸ್ವಾತಂತ್ರ್ಯಕ್ಕಾಗಿ ದುಡಿದ ಹಲವು ಮಹನೀಯರನ್ನು ಬಿಜೆಪಿಯವರು ಬೇಕೆಂದೇ ನಿರ್ಲಕ್ಷಿಸುವ ಮೂಲಕ ಇಂತಹ ಪರಿಸ್ಥಿತಿಗೆ ಕಾರಣರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ಲಾಭಕ್ಕೋಸ್ಕರ ಬಿಜೆಪಿಯವರು ಇಂತಹ ಕಾರ್ಯ ಮಾಡುತ್ತಿದ್ದು, ಇದರಿಂದ ಮನಸ್ಸು ಮನಸ್ಸುಗಳ ನಡುವೆ ಒಡಕು ಮೂಡಿದೆ. ಸಾಮರಸ್ಯ ಮೂಡಿಸುವ ಕೆಲಸ ಮಾಡಬೇಕಾದವರು ಅದನ್ನು ಮರೆಯುತ್ತಿದ್ದಾರೆ ಎಂದರು.