ಯಾದಗಿರಿ: ಕೋಮು ಪ್ರಚೋದನೆ ನೀಡುವ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
ಒಂದು ಕೋಮಿನ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಆರೋಪದ ಮೇಲೆ 2015ರಲ್ಲಿ ಆಂದೋಲದ ಸಿದ್ದಲಿಂಗ ಶ್ರೀ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಇಂದು ಯಾದಗಿರಿ ಸೆಷನ್ಸ್ ಕೋರ್ಟ್ ಸಿದ್ದಲಿಂಗ ಸ್ವಾಮಿಜಿ ದೋಷಿ ಎಂದು ತೀರ್ಪು ನೀಡಿದೆ.
ದೋಷಿಯ ಹಿನ್ನಲೆ ವರದಿ ನೀಡುವಂತೆ ಪ್ರೊಬೇಷನರಿ ಅಧಿಕಾರಿಗಳಿಗೆ ತಿಳಿಸಿದ್ದು, ವರದಿ ಬಂದ ಬಳಿಕ ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.