ಮೈಸೂರು: ಅಪ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪ್ರಜಾಪ್ರಭುತ್ವ ರಾಷ್ಟ್ರಗಳ ಮೇಲೆ ಇಂತಹ ದಾಳಿ ಖಂಡನೀಯ ಎಂದಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ತಾಲಿಬಾನ್ ಉಗ್ರರ ಅಟ್ಟಹಾಸ, ಇಂತಹ ದಾಳಿಗಳಿಂದ ಆತಂಕ ಎದುರಾಗಿದೆ. ಇದರ ವಿರುದ್ಧ ಎಲ್ಲಾ ದೇಶಗಳು ಒಟ್ಟಾಗಿ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದ್ದಾರೆ.
ಅಪ್ಘಾನಿಸ್ತಾನದಲ್ಲಿ ಉಂಟಾಗಿರುವ ಪರಿಸ್ಥಿತಿ ಎಲ್ಲರನ್ನೂ ಭಯಗೊಳಿಸುವಂತದ್ದು, ವಿಶ್ವಸಂಸ್ಥೆ ಮೇಲೆ ಒತ್ತಡ ಹೇರಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.