ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ನಡೆದಿದೆ.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳು ವಿಧಾನಸೌಧ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ವಿದ್ಯಾರ್ಥಿಗಳನ್ನು ತಡೆದಿದ್ದಾರೆ.
ʼನಿರುದ್ಯೋಗʼ ಭತ್ಯೆ ಪಡೆಯುವುದು ಹೇಗೆ ಗೊತ್ತಾ…..? ಇಲ್ಲಿದೆ ಒಂದಷ್ಟು ಮಾಹಿತಿ
ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ಘರ್ಷಣೆ, ವಾಗ್ವಾದ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.