ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ರಾಜಧಾನಿ ಬೆಂಗಳೂರಿನಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ನಿರತ ಸಾರಿಗೆ ನೌಕರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಕುಟುಂಬ ಸಮೇತರಾಗಿ ಪ್ರತಿಭಟನೆ ನಡೆಸಿದ್ದಾರೆ. ಅಂತಿಮವಾಗಿ ಫ್ರೀಡಂ ಪಾರ್ಕ್ ನಿಂದ ಸಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಮುಂದಾಗಿದ್ದಾರೆ. ಈ ವೇಳೆ ಮಾರ್ಗ ಮಧ್ಯೆಯೇ ತಡೆದ ಪೊಲೀಸರು ಸಾರಿಗೆ ನೌಕರರನ್ನು ವಶಕ್ಕೆ ಪಡೆದಿದ್ದಾರೆ.