alex Certify BIG NEWS: ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ನಕಲಿ ಮಾರ್ಕ್ಸ್ ಕಾರ್ಡ್ ಮಾರಾಟ; ಜಾಲ ಬೇಧಿಸಿದ CCB | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ನಕಲಿ ಮಾರ್ಕ್ಸ್ ಕಾರ್ಡ್ ಮಾರಾಟ; ಜಾಲ ಬೇಧಿಸಿದ CCB

Defamatory post: CCB to submit case documents || Defamatory post: CCB to submit case documents

ಬೆಂಗಳೂರು: ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಹೆಸರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ತಯಾರಿಸುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಬೇಧಿಸಿದ್ದಾರೆ.

ದೇಶದ 29 ವಿವಿಗಳ ಅಂಕಪಟ್ಟಿ ನಕಲಿ ಮಾಡಿ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರಿಂದ 1500ಕ್ಕೂ ಹೆಚ್ಚು ನಕಲಿ ಮಾರ್ಕ್ಸ್ ಕಾರ್ಡ್, 80 ನಕಲಿ ಸೀಲ್, 30 ಹಾಲೋಗ್ರಾಂ ಸ್ಟಿಕ್ಕರ್, 8 ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಹಾಗೂ ಪಿಯು ಬೋರ್ಡ್, ಯುಪಿಯ ಸಿ.ವಿ. ರಾಮನ್ ವಿವಿ, ದೆಹಲಿಯ ಸೆಕೆಂಡರಿ ಬೋರ್ಡ್, ಮೇಘಾಲಯದ ವಿಲಿಯಂ ಕ್ಯಾರಿ ಯುನಿವರ್ಸಿಟಿ ಸೇರಿದಂತೆ ದೇಶದ 29 ವಿವಿಗಳ ನಕಲಿ ಮಾರ್ಕ್ಸ್ ಕಾರ್ಡ್ ತಯಾರಿಸಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...