alex Certify BIG NEWS: ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಕನ್ನಡ ಭೇಟಿ ಹಿಂದಿದೆ ಈ ‘ವಿಶೇಷತೆ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಕನ್ನಡ ಭೇಟಿ ಹಿಂದಿದೆ ಈ ‘ವಿಶೇಷತೆ’

ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಡಲ ನಗರಿ ಮಂಗಳೂರಿಗೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಒಟ್ಟು 3,783 ಕೋಟಿ ರೂಪಾಯಿ ಮೊತ್ತದ 8 ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.

ನರೇಂದ್ರ ಮೋದಿಯವರ ಈ ಭೇಟಿಯ ಹಿಂದೆ ವಿಶೇಷತೆಯೊಂದಿದ್ದು, ಪ್ರಧಾನಿಯೊಬ್ಬರು ನಾಲ್ಕೂವರೆ ದಶಕಗಳ ಬಳಿಕ ‘ಅಧಿಕೃತ’ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಎಂಬ ಹೆಗ್ಗಳಿಕೆ ಈ ಕಾರ್ಯಕ್ರಮಕ್ಕೆ ಇದೆ.

1975ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ಎನ್ ಎಂ ಪಿ ಟಿ ಉದ್ಘಾಟನೆಗೆ ಆಗಮಿಸಿದ್ದು, ಆ ಬಳಿಕ ನರೇಂದ್ರ ಮೋದಿಯವರು ದಕ್ಷಿಣ ಕನ್ನಡಕ್ಕೆ ಹಲವು ಬಾರಿ ಆಗಮಿಸಿದ್ದರಾದರೂ ಅಧಿಕೃತ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...