ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಯಾದಗಿರಿ ಜಿಲ್ಲೆಗೆ ಭೇಟಿ ನೀಡಲಿದ್ದು, ಸುರಪುರ ಮತಕ್ಷೇತ್ರದ ಕೊಡೆಕಲ್ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ ಭಾರಿ ಸಿದ್ಧತೆ ನಡೆಯುತ್ತಿದ್ದು, ಇದರ ಮಧ್ಯೆ ಹುಣಸಗಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈ ಕುರಿತಂತೆ ಸುರಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದು, ಪ್ರಧಾನ ಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹುಣಸಗಿ ತಾಲೂಕಿನ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ, ಅನುದಾನ ರಹಿತ, ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳಿಗೆ ಯಾದಗಿರಿ ಜಿಲ್ಲಾಧಿಕಾರಿಗಳ ಆದೇಶದಂತೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.