ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ವಿವಾದ ಸೃಷ್ಟಿಸಿಕೊಂಡಿದ್ದಾರೆ. ಮೋದಿಯವರನ್ನು ನಾಲಾಯಕ್ ಎಂದು ಜರಿದಿದ್ದಾರೆ.
ಕಲಬುರ್ಗಿಯಲ್ಲಿ ಮಾತನಾಡಿದ ಪ್ರಿಯಾಂಕ ಖರ್ಗೆ, ಮೀಸಲಾತಿ ವಿಚಾರವಾಗಿ ಬಂಜಾರಾ ಸಮುದಾಯದವರು ಆತಂಕ ಪಡುವ ಅಗತ್ಯವಿಲ್ಲ, ನಿಮ್ಮ ಸಮುದಾಯದ ಒಬ್ಬ ಮಗ ದೆಹಲಿಯಲ್ಲಿ ಕುಳಿತಿದ್ದಾನೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಇಂತಹ ನಾಲಾಯಕ್ ಮಗ ಇದ್ದರೆ ಮನೆ ನಡೆಸೋಕೆ ಆಗುತ್ತಾ? ಎಂದು ಪ್ರಶ್ನಿಸುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಮೊನ್ನೆಯಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯವರನ್ನು ವಿಷದ ಹಾವು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ಇದರ ಬೆನ್ನಲ್ಲೇ ಈಗ ಖರ್ಗೆ ಅವರ ಮಗ ಪ್ರಿಯಾಂಕ ಖರ್ಗೆ ಮೋದಿಯವರನ್ನು ನಾಲಾಯಕ್ ಎಂದು ಬೈಯ್ಯುವ ಮೂಲಕ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.