ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೀರಾಬೆನ್ ಅವರು ಅನಾರೋಗ್ಯಕ್ಕೀಡಾಗಿರುವ ಹಿನ್ನೆಲೆಯಲ್ಲಿ ಅಹಮದಾಬಾದ್ ನ ಯು ಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀರಾಬೆನ್ ಅವರಿಗೆ ಈ ವರ್ಷ 100 ವರ್ಷ ತುಂಬಿದೆ. ಈ ಹಿಂದೆಯೂ ಹೀರಾಬೆನ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ ಎಂದು ತಿಳಿದುಬಂದಿದೆ.