
ಬೆಂಗಳೂರು: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಗುಜರಾತ್ ನಲ್ಲಿ ಬಿಜೆಪಿ 153 ಸ್ಥಾನಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ. ಪ್ರಧಾನಿ ಮೋದಿಯವರ ಜನಪ್ರಿಯತೆಗೆ ಫಲಿತಾಂಶವೇ ಸಾಕ್ಷಿ ಎಂದರು.
ಗುಜರಾತ್ ಫಲಿತಾಂಶ ರಾಜ್ಯದ ಮೇಲೂ ಪರಿಣಾಮ ಬೀರಲಿದೆ. ರಾಜ್ಯ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ ಎಂದು ತಿಳಿಸಿದರು.