alex Certify BIG NEWS: ಪ್ರಧಾನಿ ಮೋದಿ ನಾಯಿಗಿಂತ ಕಡೆಯಾಗಿ ಸಾಯ್ತಾರೆ ಎಂದ ಕಾಂಗ್ರೆಸ್ ಮುಖಂಡ; ಕೈ ನಾಯಕನ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ಮೋದಿ ನಾಯಿಗಿಂತ ಕಡೆಯಾಗಿ ಸಾಯ್ತಾರೆ ಎಂದ ಕಾಂಗ್ರೆಸ್ ಮುಖಂಡ; ಕೈ ನಾಯಕನ ವಿರುದ್ಧ FIR ದಾಖಲು

Modi will die a dog's death', says Congress leader Sheikh Hussainಮುಂಬೈ; ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ನಡೆಸುತ್ತಿರುವ ಬೆನ್ನಲ್ಲೇ ದೇಶಾದ್ಯಂತ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಮಧ್ಯೆ ಪ್ರಧಾನಿ ಮೋದಿಯವರ ವಿರುದ್ಧ ಕೆಂಡ ಕಾರಿದ ಕಾಂಗ್ರೆಸ್ ನಾಯಕರೊಬ್ಬರು ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟು ವಿವಾದಕ್ಕೀಡಾಗಿದ್ದಾರೆ.

ನಾಗ್ಪುರದಲ್ಲಿ ಪ್ರತಿಭಟನೆ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್, ಪ್ರಧಾನಿ ನರೇಂದ್ರ ಮೋದಿ ನಾಯಿಗಿಂತ ಕಡೆಯಾಗಿ ಸಾಯ್ತಾರೆ. ನಾಯಿಗೆ ಹೇಗೆ ಸಾವು ಬರುತ್ತೋ ಹಾಗೆ ಮೋದಿ ಸಾಯ್ತಾರೆ. ನನ್ನ ಹೇಳಿಕೆ ಬಗ್ಗೆ ನೋಟೀಸ್ ನೀಡಿದರೂ ನಾನು ಕೇರ್ ಮಾಡಲ್ಲ ಎಂದು ವಾಗ್ದಾಳಿ ನಡೆಸಿದ್ದರು. ಶೇಖ್ ಹುಸೇನ್ ಹೇಳಿಕೆ ದೇಶಾದ್ಯಂತ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ನಾಯಕನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಶೇಖ್ ಹುಸೇನ್ ವಿರುದ್ಧ ಇದೀಗ ಗಿಟ್ಟಿಖಾಡನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆದರೆ ದೂರು ದಾಖಲಿಸಲು ಬಿಜೆಪಿ ನಾಯಕರು ಪೊಲೀಸ್‌ ಠಾಣೆಗೆ ತೆರಳಿದ್ದ ವೇಳೆ ಎಫ್‌ಐಆರ್‌ ದಾಖಲಿಸದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳ ಮೇಲೆ ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದಿಂದ ಒತ್ತಡವಿತ್ತು ಎಂದು ಆರೋಪಿಸಲಾಗಿದೆ.

ಘಟನೆ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕರು, ಶೇಖ್‌ ಹುಸೇನ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಮಾತನಾಡಲು ಯಾವುದೇ ನೈತಿಕತೆಯಿಲ್ಲ. ಈ ಹಿಂದೆ ಮೋದಿಯವರನ್ನೂ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಅದೇ ರೀತಿ ಈಗ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ರಾಹುಲ್‌ ಗಾಂಧಿಯವರ ವಿಚಾರಣೆ ಮಾಡುವ ಮೂಲಕ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ ಎಂದಿದ್ದಾರೆ.

https://twitter.com/MVAGovt/status/1536920435358572544?ref_src=twsrc%5Etfw%7Ctwcamp%5Etweetembed%7Ctwterm%5E1536920435358572544%7Ctwgr%5E%7Ctwcon%5Es1_&ref_url=https%3A%2F%2Fwww.opindia.com%2F2022%2F06%2Fmodi-will-die-a-dogs-death-says-congress-leader-sheikh-hussain%2F

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...