alex Certify BIG NEWS: ಪ್ರಧಾನಿ ಮೋದಿ ಬರಿ ಬುರುಡೆ ಭಾಷಣ ಮಾಡಿ ಹೋಗ್ತಾರೆ; ಮಾಜಿ ಸಿಎಂ HDK ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ಮೋದಿ ಬರಿ ಬುರುಡೆ ಭಾಷಣ ಮಾಡಿ ಹೋಗ್ತಾರೆ; ಮಾಜಿ ಸಿಎಂ HDK ವ್ಯಂಗ್ಯ

ಬೆಂಗಳೂರು: ಜನರ ಒಳಿತಿಗಾಗಿ ಸರ್ಪ ಆಗಲು ಸಿದ್ಧ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಸರ್ಪ ಯಾವಾಗಲೂ ಡೇಂಜರ್ ಎಂದು ಟಾಂಗ್ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸರ್ಪ, ವಿಷಕನ್ಯೆ ಬಗ್ಗೆ ಚರ್ಚೆ ಮಾಡಲು ನಾನು ಹೋಗಲ್ಲ. ಇವತ್ತಿನ ರಾಜಕಾರಣದಲ್ಲಿ ಇವೆಲ್ಲ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಪ್ರಧಾನಿ ಮೋದಿಯವರು ಇಲ್ಲಿಗೆ ಬಂದು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಮೋದಿ ಬರಿ ಬುರುಡೆ ಭಾಷಣ ಮಾಡಿ ಹೋಗ್ತಿದ್ದಾರೆ. ಈ ಡಬಲ್ ಇಂಜಿನ್ ಸರ್ಕಾರವೇ ಲೂಟಿ ಮಾಡುವುದು. ಅನಗತ್ಯವಾಗಿ ವಿಪಕ್ಷಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...