ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಇಂದು ಸಂಜೆಯಿಂದಲೇ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ನಿಟ್ಟಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ದೆಹಲಿಯಿಂದ ಆಗಮಿಸಿರುವ ವಿಶೇಷ ಬುಲೆಟ್ ಪ್ರೂಫ್ ವಾಹನದಲ್ಲಿಯೇ ಪ್ರಧಾನಿ ಮೋದಿ ರೋಡ್ ಶೋ ನಡೆಸಲಿದ್ದಾರೆ.
ರೋಡ್ ಶೋ ನಡೆಸಲಿರುವ ರಸ್ತೆ ಮಾರ್ಗದಲ್ಲಿರುವ 1 ಸಾವಿರ ಮನೆಗಳಿಗೆ ಮತ್ತು ಅಂಗಡಿಗಳಿಗೆ ನೋಟೀಸ್ ನೀಡಲಾಗಿದೆ. ಮೋದಿ ರೋಡ್ ಶೋ ಭದ್ರತೆಗೆ 2600 ಪೊಲೀಸರನ್ನು ನಿಯೋಜಿಸಲಾಗಿದೆ.
ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 6 ಡಿಸಿಪಿ, 18 ಎಸಿಪಿ, 120ಕ್ಕೂ ಹೆಚ್ಚು ಪಿಐ, 250 ಪಿಎಸ್ ಐ, 2600ಕ್ಕೂ ಹೆಚ್ಚು ಪಿಸಿಗಳು, ಕೆ ಎಸ್ ಆರ್ ಪಿ ಸಿಬ್ಬಂದಿಗಳನ್ನು ಪ್ರಧಾನಿ ಮೋದಿ ರೋಡ್ ಶೋಗೆ ಭದ್ರತೆಗಾಗಿ ನಿಯೋಜಿಸಲಾಗಿದೆ.
ರೋಡ್ ಶೋ ವೇಳೆ ರಸ್ತೆ ಬಳಿಯ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸಲಾಗುತ್ತಿದೆ. ರಸ್ತೆಯ ಒಂದು ಭಾಗಕ್ಕೆ ಬ್ಯಾರಿಕೇಡ್ ಅಳವಡಿಸಲಾಗುತ್ತಿದೆ. ಒಟ್ಟು 6 ಕಿ.ಮೀ ವರೆಗೆ ಪ್ರಧಾನಿ ಮೋದಿ ರೋಡ್ ಶೋ ನಡೆಸಲಿದ್ದಾರೆ. 2 ಲಕ್ಷ ಜನರು ಸೇರುವ ನಿರೀಕ್ಷೆ ಇದೆ.