
ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸದಲ್ಲಿದ್ದು, ಅವರು ವಾಪಸ್ ಆದ ಬಳಿಕ ಕರ್ನಾಟಕದಲ್ಲಿ ಸಿಎಂ ಬದಲಾವಣೆಯಾಗಲಿದೆ ಎಂದು ಶಾಸಕ ಬಸವನ ಗೌಡಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಪ್ರಧಾನಿ ಮೋದಿ ಇನ್ನೆರಡು ದಿನದಲ್ಲಿ ವಿದೇಶ ಪ್ರವಾಸದಿಂದ ವಾಪಸ್ ಆಗಲಿದ್ದಾರೆ. ಆ ನಂತರ ಸಿಎಂ ಬದಲಾವಣೆ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುತ್ತಾರೆ. ಈಗಾಗಲೇ ಪಕ್ಷದ ಹೈಕಮಾಂಡ್ ಅಗತ್ಯ ಮಾಹಿತಿ ಪಡೆದುಕೊಂಡಿದೆ ಎಂದರು.
ದೆಹಲಿಯಲ್ಲಿ ಹೈಪವರ್ ಮೀಟಿಂಗ್ ಆಗಿದೆ. ಆದರೆ ಸಂದೇಶ ಏನಿದೆ ಎಂಬುದು ಗೊತ್ತಿಲ್ಲ. ಪಕ್ಷದ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ಒಳ್ಳೆಯ ನಿರ್ಧಾರ ಕೈಗೊಳ್ಳಲಿದ್ದಾರೆ. ಸಂಪುಟ ಪುನಾರಚನೆ ಹಾಗೂ ಸಿಎಂ ಬದಲಾವಣೆ ಬಗ್ಗೆ ಮೇ 10ರೊಳಗೆ ಅಗತ್ಯ ನಿರ್ಧಾರ ಪ್ರಕಟವಾಗಲಿದೆ ಎಂದು ಹೇಳಿದರು.