ಪಾಟ್ನಾ: ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.
ಪಾಟ್ನಾದಲ್ಲಿ ಜುಲೈ 12ರಂದು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆಂದು ಬಂದಿದ್ದ ಪ್ರಧಾನಿ ಮೋದಿಯವರನ್ನು ಉಗ್ರರು ಟಾರ್ಗೆಟ್ ಮಾಡಿದ್ದರು ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯ ಮಾದರಿಯಲ್ಲಿಯೇ ಪ್ರಧಾನಿ ಮೋದಿಯವರ ಹತ್ಯೆಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ.
ಮೋದಿಯವರ ಹತ್ಯೆಗೆ ಸಂಚು ರೂಪಿಸಿದ್ದ ಶಂಕಿತ ಉಗ್ರರಿಬ್ಬರನ್ನು ಇದೀಗ ಬಿಹಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಥರ್ ಪರ್ವೇಜ್ ಹಾಗೂ ಎಂ.ಡಿ. ಜಲಾಲುದ್ದೀನ್ ಎಂದು ಗುರುತಿಸಲಾಗಿದೆ.
ಶಂಕಿತ ಉಗ್ರರಿಗೆ ಪಾಟ್ನಾದ ಫುಲ್ವಾರಿ ಶರೀಫ್ ಪ್ರದೇಶದಲ್ಲಿ ತರಬೇತಿ ನೀಡಲಾಗಿತ್ತು. ಫುಲ್ವಾರಿ ಶರೀಫ್ ಕಚೇರಿ ಮೇಲೆ ದಾಳಿ ನಡೆಸಿರುವ ಬಿಹಾರ ಪೊಲೀಸರು ಶಂಕಿತ ಉಗ್ರರಿಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 25 ಪಾಂಪ್ಲೆಟ್ ಗಳನ್ನು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.