alex Certify BIG NEWS: ಪ್ರಧಾನಿ ಮೋದಿ ಹತ್ಯೆ ಮಾಡಿ ಎಂದು ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ; FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ಮೋದಿ ಹತ್ಯೆ ಮಾಡಿ ಎಂದು ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ; FIR ದಾಖಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಾಜಾ ಪಟೇರಿಯಾ, ಪ್ರಧಾನಿ ಮೋದಿ ಹತ್ಯೆ ಮಾಡಿ ಎಂದು ಹೇಳುವ ಮೂಲಕ ತೀವ್ರ ವಿವಾದ ಸೃಷ್ಟಿಸಿದ್ದಾರೆ.

ಸಂವಿಧಾನ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಿ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಹೇಳಿಕೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಪ್ರಧಾನಿ ಮೋದಿ ದೇಶದಲ್ಲಿ ಜಾತಿ, ಧರ್ಮ, ಭಾಷೆ ಆಧಾರದಲ್ಲಿ ವಿಭಜನೆ ಮಾಡಲು ಹೊರಟಿದ್ದಾರೆ, ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ. ದೇಶದಲ್ಲಿ ಜನರು ಬದುಕುವ ವಾತಾವರಣವಿಲ್ಲದಂತಾಗಿದೆ. ಹಾಗಾಗಿ ಮೋದಿ ಹತ್ಯೆಗೆ ಸಿದ್ಧರಾಗಬೇಕು ಎಂದು ರಾಜಾ ಪಟೇರಿಯಾ ಕರೆ ನೀಡಿರುವ ವಿಡಿಯೋ ವೈರಲ್ ಆಗಿದೆ

ರಾಜಾ ಪಟೇರಿಯಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಾಯಕರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ. ಗೃಹ ಸಚಿವರ ಸೂಚನೆ ಮೇರೆಗೆ ರಾಜಾ ಪಟೇರಿಯಾ ವಿರುದ್ಧ ಪನ್ನಾ ಪೊಲಿಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...