ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಕಸರತ್ತು ಪ್ರಾರಂಭವಾಗಿದೆ. ಪ್ರಬಲ ಖಾತೆಗಾಗಿ ಘಟಾನುಘಟಿ ನಾಯಕರ ನಡುವೆ ಪೈಪೋಟಿ ನಡೆದಿದೆ.
ಜಲಸಂಪನ್ಮೂಲ ಖಾತೆಗಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಎಂ.ಬಿ. ಪಾಟೀಲ್ ಇಬ್ಬರೂ ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ನೀರಾವರಿ ಯೋಜನೆಗಳು ಹೆಚ್ಚಿರುವುದರಿಂದ ತನಗೆ ಜಲಸಂಪನ್ಮೂಲ ಖಾತೆ ಬೇಕು ಎಂದು ಎಂ.ಬಿ. ಪಾಟೀಲ್ ಒತ್ತಾಯಿಸಿದ್ದಾರೆ.
ಇತ್ತ ಮೇಕೆದಾಟು ಯೋಜನೆಯನ್ನು ಜಾರಿ ಮಾಡಬೇಕಾದ ಅಗತ್ಯವಿದೆ ಎಂದು ಡಿ.ಕೆ. ಶಿವಕುಮಾರ್ ಆರಂಭದಿಂದಲೂ ಜಲಸಂಪನ್ಮೂಲ ಖಾತೆ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಉಭಯ ನಾಯಕರ ನಡುವೆ ಶೀತಲ ಸಮರ ನಡೆದಿದೆ. ಖಾತೆ ಹಂಚಿಕೆ ವಿಚಾರ ಸಿಎಂ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ಗೆ ಟೆನ್ಶನ್ ತಂದಿದೆ.