ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಖಾಸಗಿ ಬಸ್ ನವರು ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿಗೆ ಮುಂದಾಗಿದ್ದು, ಹಬ್ಬಕ್ಕೆ ಊರಿಗೆ ಹೋಗುವವರು ಹೈರಾಣಾಗಿದ್ದಾರೆ.
ಈ ಬಗ್ಗೆ ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ಶ್ರೀರಾಮುಲು, ದುಪ್ಪಟ್ಟು ಹಣ ವಸೂಲಿ ಮಾಡುವ ಖಾಸಗಿ ಬಸ್ ಮಾಲೀಕರ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಗ್ಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕಳೆದ ಬಾರಿ ಹಬ್ಬದಲ್ಲಿ 110 ಪ್ರಕರಣ ದಾಖಲಾಗಿತ್ತು. ಈ ಬಾರಿ ಈವರೆಗೆ 60 ಕೇಸ್ ದಾಖಲಿಸಲಾಗಿದೆ. ದಾಖಲಾಗಿರುವ ಕೇಸ್ ಗಳನ್ನು ಪರಿಶೀಲಿಸಿ ಪರ್ಮಿಟ್ ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.